ಮಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿದ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನ್ಯಾಯಾಲಯ ನೀಡಿದ ತೀರ್ಪು ನ್ಯಾಯ ಸಮ್ಮತವಾಗಿಲ್ಲ. ಕಳೆದ ಬಾರಿ ಅಯೋಧ್ಯೆ ವಿವಾದದ ತೀರ್ಪು ನೀಡಿದವರು ಈಗ ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದಾರೆ. ಇದರ ಹಿಂದಿರುವ ಉದ್ದೇಶ ಈಗ ಬಹಿರಂಗ ಆಗಿದೆ ಎಂದು ಆರೋಪಿಸಿದರು.
ಪೊಲೀಸರು ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮತ್ತು ಜಿಲ್ಲಾ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.









