ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಚಿಂತಾಮಣಿ ಡೇರಿ ಪಕ್ಕದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಆರ್.ಆರ್.ಬಾರ್ ಕ್ಯಾಷಿಯರ್ ಹೇಮಂತ್ನಿಂದ ರವಿ(31) ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಂತಾಮಣಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ!