ಬೆಂಗಳೂರು: ಅಪರಿಚಿತ ಮಹಿಳೆಯ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮುಖ ಜಜ್ಜಿ ಕೊಲೆಗೈದಿರುವ ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ಹತ್ತಿರ ನಡೆದಿದೆ.
ಗ್ರಾಮದ ನರಸಿಂಹಮೂರ್ತಿ ಎಂಬ ರೈತರ ಜಮೀನಿನಲ್ಲಿ ಸುಮಾರು 35 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ, ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.