ಶಿವಮೊಗ್ಗ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಭದ್ರಾವತಿ(Bhadravati) ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸೈಯದ್ ರಜಿಖ್(30) ಸಾವನ್ನಪ್ಪಿದ ದುರ್ದೈವಿ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.