ಮೋದಿಯವರ ಕರೆಯಂತೆ ಹೆಣ್ಣುಮಕ್ಕಳ ಜನನವನ್ನು ಸಂಭ್ರಮಿಸಬೇಕು : ಬಿ.ಸಿ.ಪಾಟೀಲ್
ಹಾವೇರಿ : ಮಗ ಮತ್ತು ಮಗಳು ಸಮಾನರು ಎನ್ನುವುದು ನಮ್ಮ ಮಂತ್ರವಾಗಿರಬೇಕು ಎಂಬ ಸದುದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಜಿ ‘ಬೇಟಿ ಬಚಾವೋ ಬೇಟಿ ಪಢಾವೋ”ಎಂಬ ಕಾರ್ಯಕ್ರಮ ಜಾರಿಗೊಳಿಸಿದ್ದು, ಹೆಣ್ಣು ಮಕ್ಕಳ ಜನನವನ್ನು ನಾವು ಖುಷಿಯಿಂದ ಸಂಭ್ರಮಿಸಬೇಕು ಎಂಬ ಪ್ರಧಾನಿಯವರ ಕರೆಯನ್ನು ಪಾಲಿಸಬೇಕೆಂದು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಹಿರೇಕೆರೂರು ಸಹಯೋಗದಲ್ಲಿ ಮಾಸೂರಿನಲ್ಲಿ ನಡೆದ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.
ಶಿಕ್ಷಣ ಎಂಬುದು ಪ್ರಗತಿಯ ಮಂತ್ರವಾಗಿದ್ದು, ಮಕ್ಕಳಿಗೆ ಅವರಿಚ್ಛಾನುಸಾರ ಪ್ರತಿಭೆಯನ್ನು ಪೋಷಿಸಬೇಕು. ಶಿಕ್ಷಣದಿಂದ ಯಾರೊಬ್ಬರು ವಂಚಿತರಾಗದಂತೆ ನೋಡಿಕೊಳ್ಳಬೇಕು. ಲಿಂಗಬೇಧವಿಲ್ಲದೇ ಸಮಾನ ಶಿಕ್ಷಣ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದೇ ನಿಜವಾದ ಆಸ್ತಿಯೆಂದು ಬಿಸಿಪಿ ಸ್ಫೂರ್ತಿಯ ಮಾತುಗಳನ್ನಾಡಿದರು.
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಆರಂಭಿಸಿದ ಬಳಿಕ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಬಹುಸ್ತರೀಯ ಜಿಲ್ಲಾ ಕಾರ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಬೇಟಿ ಬಚಾವೋ ಬೇಟಿ ಪಢಾವೋ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನದ ಕುರಿತು ಬೀದಿ ನಾಟಕಗಳನ್ನೂ ಆಯೋಜಿಸಲಾಗಿದೆ.
ಗ್ರಾಮಗಳು ಸೇರಿದಂತೆ ಜನಸ್ತೋಮ ಹೆಚ್ಚಾಗಿ ಸೇರುವೆಡೆ ಬೀದಿನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ಜನರನ್ನು ತಲುಪುವ ಪ್ರಯತ್ನ ಮಾಡಲಾಗಿದೆ.ಸಮುದಾಯಗಳನ್ನು ದೊಡ್ಡ ಮಟ್ಟದಲ್ಲಿ ತಲುಪಲು, ಯೋಜನೆಯ ಮಾಹಿತಿಯನ್ನು ಜನರಿಗೆ ತಿಳಿಸಲು ಬಾರೀ ಪ್ರಮಾಣದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶಾಲೆಗಳು, ಸೇನಾ ಶಾಲೆಗಳು ಮತ್ತು ಸರಕಾರಿ ಇಲಾಖೆಗಳನ್ನು ಬಳಸಿಕೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಶಿಶು ಅಭಿವೃದ್ಧಿ ಯೋಜನೆ ಇಲಾಖೆಗಳ ವತಿಯಿಂದ ಸರ್ಕಾರ ಹಲವು ಸಮಾವೇಶಗಳನ್ನು ಆಯೋಜಿಸಿ ಜಾಗೃತಿ ಮೂಡಿಸುತ್ತಿದೆ ಎಂದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel