ಬೆಂಗಳೂರು : ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಗಳನ್ನು ನೆಮಕ ಮಾಡಲಾಗಿದೆ. ನೆಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹುಲುವಾಡಿ ದೇವರಾಜ್, ತುಮಕೂರು ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದ ರುದ್ರೇಶ್ ಅವರನ್ನು ರಾಮನಗರ ಜಿಲ್ಲಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿದ್ದ ರುದ್ರೇಶ್ ಅವರನ್ನು ರಾಮನಗರದ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ, ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ತೆರವು ಮಾಡಲಾಗಿದೆ. ನಳಿನ್ ಕುಮಾರ್ ಕಟೀಲ್ ರಾಮನಗರಕ್ಕೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನಾಗಿ ಹುಲುವಾಡಿ ದೇವರಾಜ್ ಆಯ್ಕೆ ಮಾಡಿದ್ದಾರೆ.