ಬೆಂಗಳೂರು ; ಬಿಜೆಪಿ ನಾಯಕರು ನಮಗೆ ಲೀಗಲ್ ನೋಟಿಸ್ ಕೊಟ್ಟು ನಮ್ಮ ಕೆಲಸ ಸುಲಭ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯ ಲೀಗಲ್ ನೋಟಿಸ್ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.
ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ನಮ್ಮ ಕೆಲಸವನ್ನು ಸುಲಭ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ? ಎಂದು ಬರೆದುಕೊಂಡಿದ್ದಾರೆ.