ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ದುಡ್ಡುಕಾಣ್ತು : ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ರಾಜ್ಯದ ಜನ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡುಕಾಣ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಲೆಕ್ಕಕೊಡಿ ಅಭಿಯಾನ ಆರಂಭಿಸಿರುವ ಸಿದ್ದರಾಮಯ್ಯ, ಇಂದು ಸರಣಿ ಟ್ವೀಟ್ ಗಳ ಮೂಲಕ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ನಲ್ಲಿ.. “ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಆಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತಮೇಲೆಯೂ ದಪನ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ನಾವು ಸುಮ್ಮನಿರಬೇಕಾ”

“ರಾಜ್ಯದ ಜನ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡುಕಾಣ್ತು” ಎಂದು ಸಿದ್ದು ಜರಿದಿದ್ದಾರೆ.

ಮುಂದುವರಿದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳನ್ನು ಅವರನ್ನು ಪ್ರಶ್ನಿಸಿದರೆ “ಮಾಹಿತಿ ಕೊಡಿ” ಎನ್ನುತ್ತಾರೆ, ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ. ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ. ಜನರ ಬಳಿ ಹೋಗದೆ ನಮಗೆಬೇರೆ ದಾರಿ ಏನಿದೆ” ಎಂದು ಪ್ರಶ್ನಿಸಿದ್ದಾರೆ.

“24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ವೈ ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ ಎಂದಿರುವ ಸಿದ್ದರಾಮಯ್ಯ, ಸತ್ಯ ಹೇಳಲು ನಿಮಗೆ ಭಯ ಯಾಕೆ ಎಂದು ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This