ಬಿಜೆಪಿ-ಜೆಡಿಎಸ್‍ನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ Saaksha Tv
ಬದಾಮಿ: ಬಿಜೆಪಿ-ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ Siddaramaiah ಹೊಸ ಬಾಂಬ್ ಸಿಡಿಸಿದ್ದಾರೆ.
ಬದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರು ನಮ್ಮ ಪಕ್ಷದ ಸಿದ್ಧಾಂತಕ್ಕೆ ಒಪ್ಪಿಕೊಂಡು ಬರುವುದಾರೆ ಸ್ವಾಗತ ಎಂದು ವಿಪಕ್ಷ ನಾಯಕ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ BJP ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ. ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ ಎಂದು ಟ್ವೀಟ್ ಮಾಡಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನನ್ನ ಸಂಪರ್ಕದಲ್ಲಿ ಇದ್ದವರ ಹೆಸರು ಬಹಿರಂಗ ಪಡಿಸಲ್ಲ. ಸಮಯ ಬಂದಾಗ ಹೇಳುತ್ತೇನೆ. ನಮ್ಮ ಜೊತೆ ಎಷ್ಟು ಜನ ಬಿಜೆಪಿ-ಜೆಡಿಎಸ್ ಜನ ಸಂಪರ್ಕದಲ್ಲಿದ್ದಾರೆ ಎಂಬುವುದನ್ನು ಮಾತ್ರ ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಸಂಚಲನ ಮೂಡಿಸಿದರು.
ಇತ್ತೀಚಿಗೆ ರಾಜ್ಯ ಬಿಜೆಪಿಯಲ್ಲಿ ಕೆಲ ಶಾಸಕರು ಸಚಿವರಾಗಲು ಲಾಭಿ ನಡೆಸುತ್ತಿದ್ದಾರೆ. ಆದರೆ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೆ ಇಲ್ಲ ಎನ್ನುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಗೆ ಸದ್ಯಕ್ಕೆ ತರೆ ಎಳದಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ಕೆಲ ನಾಯಕರು ಪಕ್ಷ ತೊರೆದು ಬೇರೆ ಪಕ್ಷ ಹೋಗುವ ಸೂಚನೆಗಳನ್ನು ನೀಡುತ್ತಿದ್ದಾರೆ. ಆದರೆ ಚುನಾವಣೆ ಇನ್ನೂ ಒಂದು ವರ್ಷ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಹೈ ಡ್ರಾಮ ಶುರುವಾಗಿದೆ.