ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಭಾಗಿಯಾಗಿರಲಿಲ್ಲ : ಎಂ.ಬಿ.ಪಾಟೀಲ್
ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಭಾಗವಾದ ಕ್ವಿಟ್ ಇಂಡಿಯಾ ಚಳುವಳಿ ಸಮಯದಲ್ಲಿ RSS ನವರು ಬ್ರಿಟೀಷರ ಪರವಾಗಿದ್ದರು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಭಾಗಿಯಾಗಿರಲಿಲ್ಲ.ಅವರು ದೇಶದ ಇತಿಹಾಸ ತಿಳಿಯದೇ ಈಗ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯವರು ರಾಜ್ಯದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುತ್ತಿದ್ದಾರೆ. ಹೀಗೆ ಮಾಡಡುವುದರಿಂದ ಮತಗಳಿಸಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಜನರು ಈ ಬಾರಿ ಸರಿಯಾದ ಬುದ್ಧಿ ಕಲಿಸುತ್ತಾರೆ ಎಂದರು.
ಸಂತೋಷ ಪಾಟೀಲ್ ಡೆತ್ ನೋಟ್ ಬರೆದಿಟ್ಟು ನಾಪತ್ತೆ ಆಗಿರುವ ಬಗ್ಗೆ ಈ ಬಗ್ಗೆ ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಸರ್ಕಾರ, ಸಿಎಂ, ಗೃಹ ಸಚಿವರು ಈ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಂಡು ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.