ಚಾಮರಾಜನಗರ: ಕೆರೆಯಲ್ಲಿ ತಾಯಿ ಹಾಗೂ ಮಗನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಯಾನಗಳ್ಳಿ ಹತ್ತಿರದ ಮೇಲೂರು ತಾಲೂಕಿನ ಕೆರೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಶವಗಳು ಪತ್ತೆ ಹಿನ್ನೆಲೆ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯು ಸುಮಾರು 40 ವರ್ಷದ ಆಸುಪಾಸಿನವರು ಎನ್ನಲಾಗಿದೆ. ಬಾಲಕ 10 ವರ್ಷದವನು ಎನ್ನಲಾಗಿದೆ.
ಮೃತರ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ. ತಮಿಳುನಾಡಿನಿಂದ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.