ಬೆಂಗಳೂರು: ಯುವತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ (Suspicious Death) ಸಾವನ್ನಪ್ಪಿರುವ ಘಟನೆ ನಡೆದಿದೆ.
ಮನೆಯಲ್ಲಿಯೇ ಯುವತಿ ಸಾವನ್ನಪ್ಪಿದ್ದಾಳೆ. ಇಲ್ಲಿಯ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ (Subramanyapura Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಸಾವನ್ನಪ್ಪಿದ ಯುವತಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಘಟನೆ ತಡಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.