ವಿಜಯಪುರ : ಬಾವಿಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಅವಿವಾಹಿತೆಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಮಂಜುಳಾ ಚನ್ನಪ್ಪಗೌಡ ಪಾಟೀಲ್ (22) ಎಂದು ಗುರುತಿಸಲಾಗಿದೆ.
ಯುವತಿಯ ಶವ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.








