ನೊಯ್ಡಾ: ನೊಯ್ಡಾದಲ್ಲಿ (Noida) ಐಆರ್ ಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಅವರ ಪ್ರೇಯಸಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಬಿಎಚ್ ಇಎಲ್ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಶಿಲ್ಪಾ ಗೌತಮ್ ಮೃತ ದೇಹವು ನೊಯ್ಡಾದ ಪ್ಲಾಟ್ ಒಂದರಲ್ಲಿ ಪತ್ತೆಯಾಗಿದೆ. ಅವರು ಐಆರ್ ಎಸ್ ಅಧಿಕಾರಿಯಾಗಿದ್ದ (IRS Officer) ಸೌರಭ್ ಮೀನಾ ಅವರೊಂದಿಗೆ ಲಿವ್ ಇನ್ ಸಂಬಂಧದಲ್ಲಿದ್ದರು ಎಂದು ತಿಳಿದು ಬಂದಿದೆ.
ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಪೋಷಕರು ಸೌರಭ್ ಈ ಸಾವಿಗೆ ಕಾರಣ ಎಂದು ಆರೋಪಿಸಿದ್ದರಿಂದ ಪೊಲೀಸರು ಆತನನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.