ದಕ್ಷಿಣ ಕನ್ನಡ: ಕತ್ತು ಕೊಯ್ದ ಸ್ಥಿತಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಪತ್ತೆಯಾಗಿರುವ ಘಟನೆ ಡನೆದಿದೆ.
ಈ ಘಟನೆ ನಗರ ಹೊರವಲಯದ ಬೊಂದೇಲ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ನ ಜನರಲ್ ಮ್ಯಾನೇಜರ್(Bank Manager) ವಾದಿರಾಜ್ ಪತ್ತೆಯಾಗಿದ್ದು, ಅವರು ಮೊದಲು ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ.
ಕೂಡಲೇ ಅವರನ್ನು ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿ ಪತ್ನಿ ಮಕ್ಕಳು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.