ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಈ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ (Melukote) ನಡೆದಿದೆ.
ದುಷ್ಕರ್ಮಿಗಳು ಶಿಕ್ಷಕಿಯನ್ನು ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ದೀಪಿಕಾ (28) ಸಾವನ್ನಪ್ಪಿದ ಮಹಿಳೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿದ್ದ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಜ. 2 ರಂದು ದೀಪಿಕಾ ಶಾಲೆಗೆ ಹೋಗುವುದಾಗಿ ಹೊರಗೆ ಹೋಗಿದ್ದರು. ಆದರೆ, ಅಂದೇ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ಕುರಿತು ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವವನ್ನು ಪತ್ತೆ ಹಚ್ಚಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.