ರಾಮನಗರ: ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ.
ನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಹತ್ತಿರ 6 ವರ್ಷದ ಬಾಲಕನ ಶವವೊಂದು ಈ ರೀತಿ ಪತ್ತೆಯಾಗಿದೆ. ದುಷ್ಕರ್ಮಿಗಳು ಬಾಲಕನನ್ನು ಕೊಲೆ ಮಾಡಿ ಹಳಿಯ ಹತ್ತಿರ ಎಸೆದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಬಾಲಕನ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.