ಯಾದಗಿರಿ: ಇಬ್ಬರು ಬಾಲಕರು ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಜಿಲ್ಲೆಯ (Yadagiri) ಸುರಪುರ (Surapura) ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಓರ್ವನ ಶವ ಪತ್ತೆಯಾಗಿದ್ದು, ಮತ್ತೋರ್ವ ಬಾಲಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಸಾವನ್ನಪ್ಪಿದ ಬಾಲಕನನ್ನು ಶಂಕರ ಮೇಟಿ (10) ಎನ್ನಲಾಗಿದೆ. ಶ್ರೀಯಣ್ಣ ಚಂದ್ರಕಾಂತ್ಗಾಗಿ (8) ಹುಡುಕಾಟ ನಡೆದಿದೆ.
ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ದನ ಮೇಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಕಾಲು ಜಾರಿ ಹಳ್ಳಕ್ಕೆ ಬಿದ್ದಿದ್ದಾರೆ. ಹೀಗಾಗಿ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.