ರಾಯಚೂರು: ಬರದ ನಾಡು ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿವೆ.
ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮದ ಬಳಿ ಹಳ್ಳ ದಾಟುತ್ತಿದ್ದ ವೇಳೆ ಎತ್ತಿನ ಬಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.
ಭಾರಿ ಮಳೆಯಿಂದ ಯರಗೇರಾ ಬಳಿಯ ಹಳ್ಳ ಸಂಪೂರ್ಣವಾಗಿ ಭರ್ತಿಯಾಗಿದೆ. ಹಳ್ಳದಲ್ಲಿ ಹೆಚ್ಚಿನ ನೀರು ಹಿಯುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಜಲಾವೃತಗೊಂಡಿದೆ. ಹೀಗಾಗಿ ರಸ್ತೆ ಸಂಚಾರ ಬಂದ್ ಆಗಿದೆ.
ಹೊಲದಲ್ಲಿ ಕೆಲಸ ಮುಗಿಸಿಕೊಂಡು ಎತ್ತಿನ ಬಂಡಿಯಲ್ಲಿ ಹಿಂದುರುಗುತ್ತಿದ್ದಾಗ ರೈತ ಕುಟುಂಬ ಹಾಗೂ ಎತ್ತುಗಳು ಬಂಡಿ ಸಮೇತ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಈ ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಹಳ್ಳದಲ್ಲಿ ಸ್ವಲ್ಪ ದೂರದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ









