ರಾಯಚೂರು : ಸಾರಿಗೆ ಬಸ್ ವೊಂದು ಬೈಕ್ ಗೆ ಡಿಕ್ಕಿ (Accident) ಹೊಡೆದು ನಂತರ ಹೊಲಕ್ಕೆ ನುಗ್ಗಿದ್ದರಿಂದಾಗಿ ಬಸ್ ನಲ್ಲಿದ್ದವರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಹೊಲಕ್ಕೆ ನುಗ್ಗಿದೆ. ಈ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ನಂದಿಹಾಳದ ಹತ್ತಿರ ಬೈಕ್ ಗೆ ಡಿಕ್ ಹೊಡೆದಿದೆ.
ಪರಿಣಾಮ ಬಸ್ ನಲ್ಲಿದ್ದ 30ಕ್ಕೂ ಅಧಿಕ ಪ್ರಯಾಣಿಕರು ಹಾಗೂ ಬೈಕ್ ಸವಾರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








