ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 10 ಜನ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಜಮ್ಮು ಹಾಗೂ ಕಾಶ್ಮೀರದ ದೋಡಾದಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಹತ್ತಿರ ಬಸ್ ಸ್ಕಿಡ್ ಆದ ಪರಿಣಾಮ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ 300 ಅಡಿ ಕೆಳಕ್ಕೆ ಬಿದ್ದ ಪರಿಣಾಮ 10 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಸ್ ನಲ್ಲಿ ಸುಮಾರು 40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಗಾಯಾಳುಗಳನ್ನು ಕಿಶ್ತ್ವಾರ್ ಮತ್ತು ದೋಡಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಸಾಗಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.