ಚಿಕ್ಕಬಳ್ಳಾಪುರ: ದಂಪತಿಗಳ ಮೇಲೆ ಸಾರಿಗೆ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಹತ್ತಿರ ನಡೆದಿದೆ.
ಕೊಮ್ಮಸಂದ್ರ ಗ್ರಾಮದ 40 ವರ್ಷದ ವೆಂಕಟೇಶ್ ಹಾಗೂ ಪತ್ನಿ ಸರಸತ್ವತಮ್ಮ ಸಾವನ್ನಪ್ಪಿರುವ ದುರ್ದೈವಿಗಳು. ಸರಸ್ವತಮ್ಮ ಅವರ ಗ್ರಾಮದಲ್ಲಿನ ಇರುಮುಡಿ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದರು ಎನ್ನಲಾಗಿದೆ. ದಾರಿ ಮಧ್ಯೆ ಬೈಕ್ ಸ್ಕಿಡ್ ಆಗಿ ದಂಪತಿ ಕೆಳಗೆ ಬಿದ್ದಿದ್ದಾರೆ. ಆಗ ಹಿಂಬದಿಯಿಂದ ಬರುತ್ತಿದ್ದ ಬಸ್ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ (Chintamani Town Police Staion) ಪ್ರಕರಣ ದಾಖಲಾಗಿದೆ.