ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಮಿನಿ ಬಸ್(mini bus) ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಟನೆ ಹಾಸನ ತಾಲೂಕಿನ ಕಾರೇಕೆರೆ ಗೇಟ್ ಬಲಿ ನಡೆದಿದೆ. ವಾಹನದಲ್ಲಿದ್ದವರು ಚನ್ನರಾಯಪಟ್ಟಣಕ್ಕೆ ಮದುವೆಗೆ ಹೋಗಿ ಮರಳಿ ಬರುತ್ತಿದ್ದರು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಾಂತಿಗ್ರಾಮ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.