ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 25ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂಟರ್ಸಿಟಿ ಬಸ್ ಪಲ್ಟಿಯಾದ ಪರಿಣಾಮ ಈ ಘಟನೆ ನಡೆದಿದ್ದು, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿ 30ಕ್ಕೂ ಅಧಿಕ ಜನರಿದ್ದರು ಎನ್ನಲಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂವರ ಸ್ಥಿತಿ ಮಾತ್ರ ಗಂಭೀರವಾಗಿದೆ.
ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.