ಮುಂಬಯಿ: ಕಾರೊಂದು ವೇಗವಾಗಿ ಬಂದು ಹಲವಾರು ವಾಹನಗಳಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮುಂಬಯಿನ (Mumbai) ಬಾಂದ್ರಾ ವರ್ಲಿ ಸೀ ಲಿಂಕ್ ನಲ್ಲಿನ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಬಾಂದ್ರಾ ಮಾರ್ಗವಾಗಿ ಬರುತ್ತಿದ್ದ ಇನ್ನೋವಾ ಕಾರು ಟೋಲ್ ಬಳಿ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ವೇಗವಾಗಿ ಕಾರು ಚಲಾಯಿಸಿದ್ದಾನೆ. ಈ ಸಂದರ್ಭದಲ್ಲಿ ಹಲವು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಹೀಗಾಗಿ ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಬರೋಬ್ಬರಿ 6 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ 6 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ..