ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿದೆ.
ಈ ಘಟನೆ ಜಿಲ್ಲೆಯ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ 12ರ ಸಮಾರಿಗೆ ನಡೆದಿದೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ.
ಈ ಕಾರಿನಲ್ಲಿ ಸಚಿವರು ಹಾಗೂ ಇನ್ನಿತರ ಇಬ್ಬರು ತೆರಳುತ್ತಿದ್ದರು ಎನ್ನಲಾಗಿದೆ. ಆದರೆ, ಅದೃಷ್ಟವಷಾತ್ ಯಾರಿಗೂ ತೊಂದರೆಯಾಗಿಲ್ಲ. ಶಿವಮೊಗ್ಗದಿಂದ ರಾಜಧಾನಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆನಂತರ ಸಚಿವರು ಬೇರೆ ವಾಹನ ವ್ಯವಸ್ಥೆ ಮಾಡಿಕೊಂಡು ಪ್ರಯಾಣ ಬೆಳೆಸಿದರು ಎನ್ನಲಾಗಿದೆ. ಈ ಕುರಿತು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.