ವಿಜಯಪುರ: ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಎಪಿಎಂಸಿ (APMC) ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರದ (Vijayapura) ಗಾಂಧಿನಗರ ಪ್ರದೇಶದ್ಲಲಿರುವ ಇಟ್ಟಂಗಿ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ರಾಕ್ಷಸನಂತೆ ಹಲ್ಲೆ ನಡೆಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪೊಲೀಸರು ಆರೋಪಿ ಖೇಮು ರಾಠೋಡ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದೇವೆ. ಆದಷ್ಟು ಬೇಗ ಇನ್ನುಳಿದವರನ್ನು ಬಂಧಿಸುತ್ತೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ ಸೆಕ್ಷನ್ 109ರ ಅಡಿಯಲ್ಲಿ (ಕೊಲೆಗೆ ಯತ್ನ) ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಾರೆಂದು ಪಾಪಿ ಮಾಲೀಕ, ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿತ್ತು.
ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ನಿವಾಸಿಗಳಾದ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಹಲ್ಲೆಗೆ ಒಳಗಾದ ಕಾರ್ಮಿಕರು. ಸದ್ಯ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳು ಅರೆಸ್ಟ್ ಆಗಿದ್ದಾರೆ.








