ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಮನೆಗೆ ತೆರಳಿದ್ದ ಅವರು ಬೆಂಗಳೂರಿನ ನಿವಾಸದಲ್ಲೇ ನಿಧನರಾಗಿದ್ದಾರೆ.
ಜೋಗದ ಸಿರಿ ಬೆಳಕಿನಲ್ಲಿ ಖ್ಯಾತಿಯ ಕನ್ನಡದ ಹಿರಿಯ ಸಾಹಿತಿ ಕೆ.ಎಸ್. ನಿಸಾರ್ ಅಹ್ಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ಲ್ಲಿ ಜನಿಸಿದರು. 1959ರಲ್ಲಿ ಸ್ನಾತಕೋತ್ತರ ಪದವಿ ಪಡೆದು ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮನಸು ಗಾಂಧಿಬಜಾರು, ನೆನೆದವರ ಮನದಲ್ಲಿ, ಸಂಜೆ ಐದರ ಮಳೆ, ಆಯ್ದ ಕವಿತೆಗಳು, ನಿತ್ಯೋತ್ಸವ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. 2006ರಲ್ಲಿ ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.








