ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಪ್, ಟ್ವಿಟರ್ ಮುಂತಾದುವುಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅಂತರ್ಜಾಲ ಬಳಕೆ ಸಾರ್ವಜನಿಕರ ಮೂಲಭೂತ ಹಕ್ಕಲ್ಲ. ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ, ಅಂತರ್ಜಾಲದಲ್ಲಿ ಹಾಕಲಾಗುವ ಅನಿಸಿಕೆ ಗಳಿಗೂ ಸಂಬಂಧವಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹಾಗೂ ಅಶ್ಲೀಲ ಚಿತ್ರ ಮತ್ತು ದೃಶ್ಯಗಳನ್ನು ಹರಡುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳುಗೆಡಹುವ ಪ್ರಯತ್ನಗಳಿಗೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ಹೇಳಿದರು.
ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...








