ಚಾಮರಾಜನಗರ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಾಗೂ ರಾಜ್ಯ ಭೂಸುಧಾರಣೆ ಕಾಯ್ದೆ ವಿಚಾರವಾಗಿ ಇಂದು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಾಜಿ ಸಂಸದ ಆರ್ ಧ್ರುವ ನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಂಸದ ಆರ್ ಧ್ರುವ ನಾರಾಯಣ್, ದೇಶದಲ್ಲಿ ದಿನೇದಿನೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಬೆಲೆ ಏರಿಕೆ ಆಗುತ್ತಿರುವುದು ಬಡ ಜನರನ್ನು ಕಂಗಾಲು ಮಾಡಿದೆ. ಇಡೀ ವಿಶ್ವದಲ್ಲೇ ನಮ್ಮಲ್ಲಿ ಮಾತ್ರ 69.3% ತೆರಿಗೆ ಬಡಜನರಿಂದ ವಸೂಲಿ ಮಾಡುತ್ತಿದೆ, ಇದು ನಿಜಕ್ಕೂ ನಾಚಿಕೆಯ ಸಂಗತಿ. ಎನ್ ಡಿ ಎ ಸರ್ಕಾರ ದೇಶವನ್ನು ಲೂಟಿ ಮಾಡುವಲ್ಲಿ ಮಗ್ನವಾಗಿದೆ ಎಂದು ಆರೋಪಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಆರ್.ಧ್ರುವ ನಾರಾಯಣ್, ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸಾಗಬೇಕಿತ್ತು. ಆದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ರವರು ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಭೂಸುಧಾರಣೆ ಕಾಯ್ದೆ 1960 ರ ತಿದ್ದುಪಡಿ ಹಾಗೂ ಕೃಷಿ ಉತ್ಪನ್ನಗಳು ಖಾಸಗೀಕರಣ ಮತ್ತು ಮಾಡಲು ಹೂರಟಿರುವುದು ಖಂಡನಿಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಈ ಪ್ರತಿಭಟನೆಯಲ್ಲಿ ಶಾಸಕ ಸಿ ಪುಟ್ಟರಂಗ ಶೆಟ್ಟಿ, ನರೇಂದ್ರ ಶರ್ಮ ಹಾಗೂ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಭಾಗವಹಿಸಿದ್ದರು.