ಮುಖ್ಯಮಂತ್ರಿ ಬದಲಾವಣೆ ಊಹಾಪೋಹವಷ್ಟೆ : ಕಟೀಲ್ Kateel saaksha tv
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಮಾತು ಕೇಳಿಬಂದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಊಹಾಪೋಹವಷ್ಟೇ. ಮುಂದಿನ ಚುನಾವಣೆವರೆಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನೀವು ಕುಳಿತಲ್ಲೇ ಯಾವುದೇ ಕಲ್ಪನೆ ಮಾಡಬಹುದು. ಅವನವನ ಭಾವಕ್ಕೆ ಅವನವನ ಭಕ್ತಿಗೆ ಎಂದು ಸಿಎಂ ಬದಲಾವಣೆಯ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಇನ್ನು ಬಿಜಪಿ ಕಾರ್ಯಕಾರಣಿ ಸಭೆಯ ಬಗ್ಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಪ್ರತಿ ಜಿಲ್ಲೆಗೂ ಕಾರ್ಯಕಾರಣಿ ಸಭೆಯನ್ನು ವಿಸ್ತರಿಸಲಾಗಿದೆ. ಈ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗುವುದು. ವಿವರವನ್ನು ಬಳಿಕ ನೀಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಸಭೆಯಗೆ ಜೆ.ಪಿ.ನಡ್ಡಾ ಬರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕೋವಿಡ್ ನಿಯಮಾವಳಿಯಂತೆ ಕೆಲವು ಬದಲಾವಣೆ ಮಾಡಿಕೊಂಡಿದ್ದು, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಪ್ರವಾಸ ರದ್ದಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.