ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ ಮಕ್ಕಳು – Saaksha Tv
ನವದೆಹಲಿ: ಇಂದು 12 ರಿಂದು 14 ವರ್ಷದ ಮಕ್ಕಳಿಗೆ ಕೊರೊನಾಲಸಿಕೆ ನೀಡಲಾಗುತಿದ್ದು, ಲಸಿಕೆ ಪಡೆದ ಮಕ್ಕಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.
ಇಂದು ಕರ್ನಾಟಕ, ಉತ್ತರ ಪ್ರದೇಶ, ಅಸ್ಸೋಂ, ನವದೆಹಲಿ, ಗುಜರಾತ್ ಸೇರಿ ದೇಶದ ಹಲವು ರಾಜ್ಯಗಳಲ್ಲೂ ಮಕ್ಕಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಪಡೆದ ಮಕ್ಕಳು ಹರ್ಷ ವ್ಯಕ್ತಪಡಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯಲು ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ನಾವು ಪ್ರಧಾನಿ ಮೋದಿ ಅವರಿಗೆಗೆ ಧನ್ಯವಾದ ಹೇಳುತ್ತೇವೆ. ಮುನ್ನೆಚ್ಚರಿಕೆ ಕ್ರಮವಾಗಿ ನಾವೆಲ್ಲರೂ ಲಸಿಕೆ ಹಾಕಿಸಿಕೊಳ್ಳುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
https://twitter.com/ANI/status/1503960226944659459?ref_src=twsrc%5Etfw%7Ctwcamp%5Etweetembed%7Ctwterm%5E1503960226944659459%7Ctwgr%5E%7Ctwcon%5Es1_&ref_url=https%3A%2F%2Fwww.etvbharat.com%2Fkannada%2Fkarnataka%2Fbharat%2Fpm-urges-children-in-12-14-age-group-to-get-vaccinated%2Fka20220316130158310
ದೇಶದ ಹಲವು ಆರೋಗ್ಯ ಕೇಂದ್ರಗಳು, ಆಸ್ಪತ್ರೆಗಳು ಮತ್ತು ಶಾಲೆಗಳಲ್ಲೂ ಲಸಿಕೆ ಹಾಕಲಾಗುತ್ತಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಕಾರ್ಯಕರ್ತರು ಲಸಿಕೆ ವಿತರಣೆ ಕಾರ್ಯದಲ್ಲಿ ತೊಡಗಿದ್ದು, ಸಚಿವರು, ಶಾಸಕರು ಸಹ ಲಸಿಕೆ ಪಡೆಯಲು ಮಕ್ಕಳಿಗೆ ಪ್ರೋತ್ಸಾಹಿಸುತ್ತಿದ್ದಾರೆ.








