ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Pathan) ಮೇಲೆ ರೌಡಿಶೀಟ್ ಇಲ್ಲ ಎಂದು ಹಾವೇರಿ (Haveri) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ (Rowdy Sheet) ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ. ಶಿಗ್ಗಾಂವಿಯ (Shiggaon) ಡಿಎಸ್ಪಿ ಮತ್ತು ಪೊಲೀಸ್ ಇನ್ಸಪೆಕ್ಟರ್ (ಪಿಐ) ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಯಾಸೀರ್ ಪಠಾಣ್ ಅವರ ಮೇಲೆ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂದು ತಿಳಿಸಿದ್ದಾರೆ.








