ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ನೀಡುತ್ತಿದೆ. ರೈತರು ಬರಗಾಲದಿಂದ ತತ್ತರಿಸುತ್ತಿದ್ದರೂ ಅವರಿಗೆ ಪರಿಹಾರ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 500ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಕಾಂಗ್ರೆಸ್ ರೈತರನ್ನು ಕಡೆಗಣಿಸಿ ಬಂಪರ್ ಮೇಲೆ ಬಂಪರ್ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ. ನಮ್ಮ ರಾಜ್ಯದಲ್ಲಿ ಅಭಿವೃದ್ಧಿಗೆ ಸಿಗುವ ಹಣ 5 ಸಾವಿರ ಕೋಟಿ ರೂ. ಆದರೆ, ಅಲ್ಪಸಂಖ್ಯಾತರ ಕಾಲೋನಿಗೆ 1 ಸಾವಿರ ಕೋಟಿ ಇಟ್ಟಿದ್ದಾರೆ. ಇನ್ನುಳಿದವರು ಏನು ಮಾಡಬೇಕು. ಇದು ಓಲೈಕೆಯ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.