ಬೆಂಗಳೂರು: ರಾಜಭವನವನ್ನು ಹೆಚ್ಚು ದುರುಪಯೋಗ ಮಾಡಿಕೊಂಡ ಶ್ರೇಯಸ್ಸು ಕಾಂಗ್ರೆಸ್(Congress) ಗೆ ಸಲ್ಲುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸುಮಾರು 56ಕ್ಕಿಂತಲೂ ಅಧಿಕ ಬಾರಿ ಕಾಂಗ್ರೆಸ್ ರಾಜಭವನವನ್ನು ದುರುಪಯೋಗ ಪಡೆಸಿಕೊಂಡು ಸರ್ಕಾರಗಳನ್ನು ಉರುಳಿಸಿದೆ ಎಂದು ಹೇಳಿದ್ದಾರೆ.
ಅತಿ ಹೆಚ್ಚು ವಿವಾದಾತ್ಮಕ ಹಾಗೂ ಪ್ರಶ್ನಾರ್ಹ ರಾಜ್ಯಪಾಲರಾಗಿದ್ದ ಗ್ರೇಟ್ ಹಂಸರಾಜ ಭಾರದ್ವಾಜ್ ಅವರು ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಏನೂ ಪ್ರಕರಣ ಇಲ್ಲದೇ ಅವರ ವಿರುದ್ಧ ತನಿಖೆಗೆ ಆದೇಶಿಸಿದ್ದರು. ಈಗ ಆ ಪ್ರಕರಣ ಬಿದ್ದುಹೋಗಿದೆ. ಕಾಂಗ್ರೆಸ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳುತ್ತದೆಯೇ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಆರಂಭವಾಗಿದೆ. ಅಭಿವೃದ್ಧಿಯಲ್ಲಿ ನಯಾಪೈಸೆ ಕೊಡುತ್ತಿಲ್ಲ. ಶಾಸಕರೆಲ್ಲ ಗಂಟು ಬಿದ್ದಿದ್ದಾರೆ. ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ನಾಯಕರೆಲ್ಲ ವರ್ಗಾವಣೆಯಲ್ಲಿಯೇ ದುಡ್ಡು ಮಾಡುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.