ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪಕ್ಷದ ಇತರ ಮುಖಂಡರು ರಾಷ್ಟ್ರಪತಿ ಭವನವನ್ನು ತಲುಪಿ, ದೆಹಲಿಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ಮನವಿ ಪತ್ರವನ್ನು ಸಲ್ಲಿಸಿ ಗೃಹ ಸಚಿವರ ರಾಜಿನಾಮೆಗೆ ಒತ್ತಾಯಿಸಿದರು.

ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ನಾಯಕನಾಗಿ ಮತ್ತೊಮ್ಮೆ ಆಯ್ಕೆ ಆದ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ದೆಹಲಿ ಗಲಭೆ ಮತ್ತು ಹತ್ಯೆ ಬಗ್ಗೆ ತನಿಖೆ ಆಗಬೇಕೆಂದು ಆಗ್ರಹಿಸಿದರು. ಕೇಂದ್ರ ಮತ್ತು ದೆಹಲಿ ಸರಕಾರ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮಾತನಾಡಿ ರಾಷ್ಟ್ರಪತಿಯವರು ಮಧ್ಯ ಪ್ರವೇಶಿಸಿ ಕೇಂದ್ರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ ಧರ್ಮದ ಪಾಠ ತಿಳಿಸುವ ಅಗತ್ಯವಿದೆ ಎಂದರು.








