ಬಿಗ್ ಬಾಸ್ ಸ್ಪರ್ಧಿಯೊಬ್ಬರು ಸೆಟ್ ನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ನಡೆದಿದೆ. ಸ್ಪರ್ಧಿ ಆಯೆಶಾ ಖಾನ್ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದಿ ಆವೃತ್ತಿಯಲ್ಲಿ ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಹಿಂದಿ ಆವೃತ್ತಿಯಲ್ಲಿ ಬರುತ್ತಿರುವ ಬಿಗ್ ಬಾಸ್ ನಲ್ಲಿ ವಿಕ್ಕಿ ಜೈನ್, ಖಾನ್ಜಾದಿ, ನೀಲ್ ಭಟ್, ಅಭಿಷೇಕ್ ಕುಮಾರ್, ಅಂಕಿತಾ ಲೋಖಂಡೆ, ಮುನಾವರ್ ಫರುಕಿ, ಜಿಗ್ನಾ ವೋರಾ ಸೇರಿದಂತೆ ಹಲವರು ಕಂಟೆಸ್ಟೆಂಟ್ ಇದ್ದಾರೆ. ಕಾಮಿಡಿಯನ್ ಮುನಾವರ್ ಫರುಕಿ (Munawar Faruqui)ಕೂಡ ಅಲ್ಲಿದ್ದಾರೆ. ಅವರ ಗರ್ಲ್ ಫ್ರೆಂಡ್ ಎಂದು ಹೇಳಿಕೊಂಡ ಯುವತಿಯೊಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದರು. ಅವರೇ ಈ ಆಯೆಶಾ.
ಮುನಾವರ್ ಫಾರುಕಿ ವಿರುದ್ಧ ಈಗಾಗಲೇ ಸಾಕಷ್ಟು ಆರೋಪ ಮಾಡಿರುವ ಆಯೆಶಾ ಖಾನ್ (Ayesha Khan), ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿತ್ತು. ಸೇಡು ತೀರಿಸಿಕೊಳ್ಳುವ ಸಾಕಷ್ಟು ಮಾತುಗಳನ್ನು ಅವರು ಆಡಿದ್ದರು. ಮುನಾವರ್ ಮುಖವಾಡ ಕಳಚುತ್ತೇನೆ ಎಂದು ಗದರಿದ್ದರು. ಮಾಡಿರುವ ತಪ್ಪಿಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಹೇಳಿದ್ದರು.