ಮೈಸೂರು: ಮುಡಾ ಹಗರಣದ (MUDA Scam Case)ಲ್ಲಿ ಇಡಿ ವಿಚಾರಣೆಗೆ ಹಾಜರಾಗಿದ್ದ ಸಿಬ್ಬಂದಿಯೊಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಇತ್ತೀಚೆಗಷ್ಟೇ ಇ.ಡಿ (ED) ಅಧಿಕಾರಿಗಳು ಮುಡಾ ಹಗರಣದ ಕಿಂಗ್‌ಪಿನ್ ದ್ವಿತೀಯ ದರ್ಜೆ ಸಹಾಯಕ ಬಿ.ಕೆ.ಕುಮಾರ್‌ನನ್ನು ವಿಚಾರಣೆಗೆ ಒಳಪಡಿಸಿದ್ದರು. ಇದರ ಬೆನ್ನಲ್ಲೇ ಗುತ್ತಿಗೆ ಸಿಬ್ಬಂದಿ ಕುಮಾರ್‌ನನ್ನು ಇಡಿ ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಸೇವೆಯಿಂದ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಕುಮಾರ್ ಪಾಲಿಕೆ ನೌಕರನಾಗಿ ಕೆಲಸ ಆರಂಭಿಸಿದ್ದ. ಹೆಚ್ಚುವರಿ ಕೆಲಸಕ್ಕಾಗಿ ಮುಡಾಗೆ ನೇಮಕವಾಗಿದ್ದ. ಆದರೆ, ಈತ ಮುಡಾದಲ್ಲಿ ಕೆಲಸ ಮಾಡುತ್ತಾ ಮಹಾನಗರ ಪಾಲಿಕೆಯಿಂದಲೂ ಸಂಬಳ ಪಡೆಯುತ್ತಿದ್ದ. ಎರಡೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ಕರ್ತವ್ಯ ನಿರ್ವಹಿಸಿ ಎರಡೆರಡು ವೇತನ ಪಡೆದು ಕಾನೂನು ಉಲ್ಲಂಘನೆ ಮಾಡಿದ್ದ. ಹೀಗಾಗಿ ಆತನನ್ನು ಸೇವೆಯಿಂದ ವಜಾ ಮಾಡಲಾಗಿದೆ.
ಮುಡಾದಲ್ಲಿ ಸಂರಕ್ಷಿಸಿ ಇಡಲಾಗಿದ್ದ 8 ಸಾವಿರ ಸೈಟ್ ಗಳ ಕುರಿತು ಅಧಿಕಾರಿ ಕುಮಾರ್ ಮಾಹಿತಿ ನೀಡಿದ್ದ. ಈ ಸೈಟ್ ಗಳನ್ನು 50-50 ನಿಯಮದಲ್ಲಿ ಆಯುಕ್ತರು ಮಂಜೂರು ಮಾಡಿದ್ದರು. ಹಿಂದಿನ ಆಯುಕ್ತರಾದ ನಟೇಶ್ ಹಾಗೂ ದಿನೇಶ್‌ಕುಮಾರ್ ಗೆ ಈತ ಅಕ್ರಮದಲ್ಲಿ ಸಹಾಯ ಮಾಡಿರುವ ಆರೋಪವಿದೆ.








