ದೆಹಲಿ: ಆದಾಯ ತೆರಿಗೆ ಇಲಾಖೆಯು 2014 ರಿಂದ 2017ರ ವರೆಗೆ ಸತತ ಮೂರು ವರ್ಷಗಳ ಕಾಲ ಕಾಂಗ್ರೆಸ್ ವಿರುದ್ಧ ಆರಂಭಿಸಿರುವ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ,ಪುರುಷೇಂದ್ರ ಕುಮಾರ್ ಕೌರವ್ ಇದ್ದ ಪೀಠ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದೆ. ಮರು-ಮೌಲ್ಯಮಾಪನ ಪ್ರಕ್ರಿಯೆಗಳನ್ನು ಕಾಂಗ್ರೆಸ್ ವಿರೋಧಿಸಿದ್ದು, ತೆರಿಗೆ ಇಲಾಖೆಯು “ಮಿತಿಯಿಂದ ನಿರ್ಬಂಧಿಸಲ್ಪಟ್ಟಿದೆ” ಎಂದು ಹೇಳಿದೆ. ಅಲ್ಲದೇ, ಯಾವುದೇ ಶಾಸನಬದ್ಧ ನಿಬಂಧನೆಗಳ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ.
ಕಾಂಗ್ರೆಸ್ನ ‘ಮರೆಯಾಗಿಟ್ಟ ‘ ಆದಾಯ 520 ಕೋಟಿ ರೂ. ಈ ತಿಂಗಳ ಆರಂಭದಲ್ಲಿ, ದೆಹಲಿ ಹೈಕೋರ್ಟ್ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶವನ್ನು ಎತ್ತಿಹಿಡಿದಿದೆ. 100 ಕೋಟಿ ರೂ.ಗಿಂತ ಹೆಚ್ಚಿನ ಬಾಕಿ ವಸೂಲಿಗಾಗಿ ತೆರಿಗೆ ಇಲಾಖೆಯ ನೋಟಿಸ್ಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ಅರ್ಜಿ ತಿರಸ್ಕರಿಸಿತು.