ನಟಿ ತ್ರಿಷಾ ಅವರ ಬಗ್ಗೆ ಕೀಳು ಹೇಳಿಕೆ ನೀಡಿದ್ದ ಖಳನಟ ಮನ್ಸೂರ್ ಅಲಿ ಖಾನ್ ಗೆ ಕೋರ್ಟ್ ಛೀಮಾರಿ ಹಾಕಿದೆ.
ಕೀಳು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ಕೇಸ ದಾಖಲಾಗಿತ್ತು. ಹೀಗಾಗಿ ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಅಲ್ಲದೇ, ಜಾಮೀನು ಅರ್ಜಿ ಸಲ್ಲಿಸಿದ್ದ. ಆನಂತರ ಠಾಣೆಗೆ ಹಾಜರಾಗಿದ್ದ.
ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿದೆ ಎನ್ನಲಾಗಿದೆ.
ಆತನ ಹೇಳಿಕೆಗೆ ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದ್ದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿದ್ದ. ಆತನ ಹೇಳಿಕೆಗೆ ಸೆಲೆಬ್ರಿಟಿಗಳು ಹಾಗೂ ಚಿತ್ರ ತಂಡ ಆಕ್ರೋಶ ವ್ಯಕ್ತಪಡಿಸಿತ್ತು. ಖಷ್ಬೂ ಅವರು, ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.