ಬೆಂಗಳೂರು: ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ, ಡ್ರಮ್ ನಲ್ಲಿ ಇಟ್ಟಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಿಸರ್ಗ ಲೇಔಟ್ ನಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡ್ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ದುರ್ವಾಸನೆ ಬರುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.