ಲಕ್ನೋ: ಮಹಿಳೆಯ ಮೃತದೇಹ ಸೂಟ್ ಕೇಸ್ ನಲ್ಲಿ ತುಂಬಿ ರಸ್ತೆಯಲ್ಲಿ ಇಟ್ಟಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ (Uttar Pradesh) ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ (Delhi-Lucknow Highway) ಈ ಘಟನೆ ನಡೆದಿದೆ. ಸಾವನ್ನಪ್ಪಿರುವ ಮಹಿಳೆಯ ವಯಸ್ಸು ಸುಮಾರು 25 ರಿಂದ 30 ವರ್ಷ ಎಂದು ಪೊಲೀಸರು ಅಂದಾಜಿಸಿದ್ದಾರೆ.
ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಜನ ಈ ಸೂಟ್ ಕೇಸ್ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೂಟ್ಕೇಸ್ ಪರಿಶೀಲಿಸಿದಾಗ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಮೃತದೇಹದ ಮೇಲೆ ಅಲ್ಲಲ್ಲಿ ಗಾಯದ ಗುರುತುಗಳಿವೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯ ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆಯ ಮೃತದೇಹದ ಜೊತೆಗೆ ಬಟ್ಟೆಗಳು ಸಹ ಅದರಲ್ಲಿವೆ. ಅವುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.