ಲಕ್ನೋ: ನಡುರಸ್ತೆಯಲ್ಲೇ ಮಹಿಳೆಯ ರುಂಡವಿಲ್ಲದ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ (Uttar Pradesh) ಕಾನ್ಪುರ – ದೆಹಲಿ (Kanpur- Delhi) ಹೆದ್ದಾರಿಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಉತ್ತರ ಪ್ರದೇಶದ ಕಾನ್ಪುರದ ಗುಜ್ಜೈನಿ ಎಂಬಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯ ರುಂಡವಿಲ್ಲದೆ ಬೆತ್ತಲೆಯಾಗಿ ಶವ ಪತ್ತೆಯಾಗಿದೆ. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಮಹಿಳೆಯ ಶವಕ್ಕಾಗಿ ಶೋದ ಕಾರ್ಯ ನಡೆಸಿದ್ದಾರೆ.
ಮಹಿಳೆಯ ಮೂಳೆಗಳು ಹಾಗೂ ಹಲ್ಲುಗಳು ಮುರಿದಿವೆ ಎಂದು ಉಪ ಪೊಲೀಸ್ ಆಯುಕ್ತ ರವೀಂದ್ರ ಕುಮಾರ್ ತಿಳಿಸಿದ್ದಾರೆ. ಈ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ. ಶವ ಪತ್ತೆಯಾದ ಸ್ಥಳದಲ್ಲಿ ಯಾವುದೇ ಸಿಸಿ ಕ್ಯಾಮೆರಾಗಳು ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಸುಮಾರು 3 ಕಿ.ಮೀ ದೂರದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮಹಿಳೆಯೊಬ್ಬರು ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಆಕೆ ಧರಿಸಿರುವ ಬಟ್ಟೆಗಳು ಶವ ಸಿಕ್ಕಿದ ಸಮೀಪ ಕಂಡು ಬಂದಿರುವ ಬಟ್ಟೆಯ ತುಂಡುಗಳು ಮತ್ತು ಚಪ್ಪಲಿಗಳು ಹೊಂದಿಕೆಯಾಗಿವೆ. ಸದ್ಯ ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.