ಕಲಬುರಗಿ: ಡ್ರೈನೇಜ್ ಸ್ವಚ್ಚತೆ ಮಾಡಲು ಹೋಗಿದ್ದ ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಕೈಲಾ ನಗರದಲ್ಲಿ ಜಲ ಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಸ್ವಸ್ಥಗೊಂಡ ಓರ್ವನ ಸ್ಥಿತಿ ಗಂಭಿರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಲಬುರಗಿ ನಗರದ ಕೈಲಾಶ್ ನಗರದಲ್ಲಿ ಈ ಘಟನೆ ನಡೆದಿದ್ದು, ಲಾಲ್ ಅಹ್ಮದ್, ರಶೀದ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಜುವಿನ ಸ್ಥಿತಿ ಗಂಭೀರವಾಗಿದೆ.
ಕಲಬುರಗಿ ಜಲಮಂಡಳಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಸಿಬ್ಬಂದಿಗಳು, ಡ್ರೈನೇಜ್ ಕಟ್ಟಿಕೊಂಡ ಹಿನ್ನೆಲೆಯಲ್ಲಿ ಕ್ಲಿನ್ ಮಾಡಲು ಮುಂದಾಗಿದ್ದರು. 18 ಅಡಿ ಆಳದ ಡ್ರೈನೇಜ್ ನೊಳಗೆ ಇಳಿದು ಕೆಲಸ ಮಾಡುತ್ತಿದ್ದಾಗ ಮೇಲೆ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.
ಒಬ್ಬನನ್ನು ರಕ್ಷಣೆ ಮಾಡಲು ಇಳಿದ ಇನ್ನಿಬ್ಬರು ಕೂಡ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಮೇಲೆ ಎತ್ತಿದ್ದ ಬಳಿಕವು ಆಸ್ಪತ್ರೆ ಸಾಗಿಸಲು ತಡವಾದ ಹಿನ್ನೆಲೆ ಇಬ್ಬರ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕಲಬುರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel