ಖಾಕಿ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು : ಠಾಣೆ ಮುಂದೆ ಹೈಡ್ರಾಮ
ಬೆಂಗಳೂರು : ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಠಾಣೆಯಲ್ಲಿ ಮೃತಪಟ್ಟಿದ್ದು, ಪೊಲೀಸ್ ಠಾಣೆಯ ಎದುರು ಆಫ್ರಿಕನ್ ಪ್ರಜೆಗಳು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ಬಿಗುಗೊಂಡಿದ್ದು, ಲಾಠಿ ಚಾರ್ಜ್ ನಡೆಸಲಾಗಿದೆ.
ಡ್ರಗ್ಸ್ ಕೇಸ್ ನಲ್ಲಿ ಆಫ್ರಿಕನ್ ಪ್ರಜೆ ಜೋಯೆಲ್ ಮಲು ಎಂಬಾತನನ್ನು ಜೆಸಿ ನಗರ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಜೋಯೆಲ್, ಎದೆ ನೋವು, ಶೀತ ಅಂತ ಹೇಳಿದ್ದು, ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿ ಆತ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಠಾಣೆ ಮುಂದೆ ಜಮಾಯಿಸಿದ ನೈಜಿರಿಯನ್ ಪ್ರಜೆಗಳ ಗುಂಪು, ಪ್ರತಿಭಟನೆ ನಡೆಸಿದ್ದಾರೆ.
ಜೆಸಿ ನಗರ ಠಾಣೆ ಮುಂದೆ ಕಾರು ನಿಲ್ಲಿಸಿ ಕಾರಿನಲ್ಲಿ ಮ್ಯೂಸಿಕ್ ಹಾಕಿಕೊಂಡು, ಸಿಗರೇಟ್ ಸೇದುತ್ತಾ ನೈಜೀರಿಯನ್, ಆಫ್ರಿಕನ್ ಪ್ರಜೆಗಳು ಪ್ರತಿಭಟಿಸುತ್ತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.
ಇನ್ನು ಜೊವಾಲ್ ಮಲುನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ಹಣ ಕೇಳಿದ್ದರು ಎಂದು ಆರೋಪಿಸಿರುವ ಮೃತನ ಸ್ನೇಹಿತರು, ಈ ಸಾವಿಗೆ ಪೊಲೀಸರೇ ಕಾರಣ ಎಂದು ಗಲಾಟೆ ಮಾಡುತ್ತಿದ್ದು, ಪೊಲೀಸ್ ಲಾಠಿ ಚಾರ್ಜ್ ನಡೆಸಿದ್ದಾರೆ.