ಒಮಿಕ್ರಾನ್ ಆತಂಕ – ದೆಹಲಿಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿ…..
1 min read
ಒಮಿಕ್ರಾನ್ ಆತಂಕ – ದೆಹಲಿಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿ…..
ದೆಹಲಿಯಲ್ಲಿ ಹೆಚ್ಚುತ್ತಿರುವ ಕರೋನಾ ಮತ್ತು ಓಮಿಕ್ರಾನ್ ಪ್ರಕರಣಗಳನ್ನ ಗಮನದಲ್ಲಿಟ್ಟುಕೊಂಡು ವಾರಾಂತ್ಯದ ಕರ್ಫ್ಯೂ ವಿಧಿಸಿ ದೆಹಲಿ ಸರ್ಕಾರ ಆದೇಶಿಸಿದೆ. ಇದರ ಅಡಿಯಲ್ಲಿ ಶನಿವಾರ ಮತ್ತು ಭಾನುವಾರ ದೆಹಲಿ ಸಂಪೂರ್ಣವಾಗಿ ಬಂದ್ ಆಗಲಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿನ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗುವುದು ಎಂದು ಅವರು ಎಂದು ಉಮಮುಖ್ಯಮಂತ್ರಿ ತಿಳಿಸಿದ್ದಾರೆ. ಖಾಸಗಿ ಕಚೇರಿಗಳು 50% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತವೆ. ಸೋಮವಾರ, ದೆಹಲಿಯಲ್ಲಿ 4099 ಕರೋನಾ ಪ್ರಕರಣಗಳು ಕಂಡುಬಂದಿವೆ ಮತ್ತು ಪಾಸಿಟಿವಿಟಿ ಪ್ರಮಾಣದ ದರ 6.46% ಕ್ಕೆ ಏರಿಕೆಯಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೂ ಸಹ ಒಮಿಕ್ರಾನ್ ರೂಪಾಂತರ ಪತ್ತೆಯಾಗಿದ್ದು ಸಧ್ಯ ಮನೆಯಲ್ಲಿ ಐಸೋಲೇಶನ್ ಒಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳಿಗೆ ಓಮಿಕ್ರಾನ್ ರೂಪಾಂತರವೇ ಕಾರಣ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆ ಹೆಚ್ಚಾದಂತೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು ಎಂದು ಅವರು ಹೇಳಿದ್ದಾರೆ.