ಅಂಗನವಾಡಿಗಳಲ್ಲಿ LKG – UKG ಪರಿಚಯಿಸಲು ಮುಂದಾದ ಶಿಕ್ಷಣ ಇಲಾಖೆ…
ಅಂಗನವಾಡಿಗಳಲ್ಲಿ LKG – UKG ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಚಯಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಧಾನಸೌಧದ ಅಧಿವೇಶನದಲ್ಲಿ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ತಜ್ಞರ ತಂಡ ರಚಿಸಿದ್ದು ಮುಂದಿನ ಕೆಲ ದಿನಗಳಲ್ಲಿ 3 4 ಸಭೆ ನಡೆಯಲಿದೆ ಎಂದು ತಿಳಿಸಿದರು.