ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ
ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಕರೋನಾ ಕಾರಣದಿಂದಾಗಿ ಶಾಲೆಗಳು ತಡವಾಗಿ ಓಪನ್ ಆಗಿದ್ದರಿಂದ ಶೈಕ್ಷಣಿಕ ಅವಧಿ ಕಡಿತಗೊಂಡಿದೆ. ಇದರಿಂದ ಶಿಕ್ಷಕರಿಗೆ ಪಠ್ಯವನ್ನ ಪೂರ್ಣಗೊಳಿಸುವುದು ಸವಾಲಾಗಿದೆ..
ದ್ವಿತೀಯ ಪಿ ಯು ಸಿ ಅಂಕಗಳು ವೃತ್ತಿಪರ ಕೋರ್ಸ್ ಗಳಿಗೆ ಸೇರಲು ಅವಶ್ಯಕವಾಗಿರುವುದರಿಂದ, ವೇಗವಾಗಿ ಪಠ್ಯವನ್ನ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಈ ಹಿನ್ನಲೆಯಲ್ಲಿ ಪರೀಕ್ಷೆ ಮುಂದೂಡುವ ಸಾದ್ಯತೆ ಇದೆ.
ಪ್ರತಿ ವರ್ಷ ಮಾರ್ಚ್ ವೇಳೆಗೆ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಈ ಬಾರಿ ಮೇ -ಜೂನ್ ನಲ್ಲಿ ನಡೆಯುವ ಸಾಧ್ಯತೆಯಿದೆ. ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಪಠ್ಯಕ್ರಮ ಪೂರ್ಣಗೊಳಿಸಲು ಸಮಯ ಬೇಕಿದ್ದು, ಪರೀಕ್ಷೆಯನ್ನು ಮುಂದೂಡುವ ಚಿಂತನೆ ನಡೆಸಲಾಗಿದೆ.
SSLC ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಶೇಕಡ 20 ಭಾಗವನ್ನ ಕಡಿತಗೊಳಿಸಲಾಗಿತ್ತು. ಆದರೆ ಪಿ ಯು ಸಿ ವಿದ್ಯಾರ್ಥಿಗಳಿಗೆ ಕಡಿತಗೊಳಿಸಿರಲಿಲ್ಲ…








