ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ  7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ….

1 min read

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ  7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬಂಗಾಳ ಕೊಲ್ಲಿಯಲ್ಲಿನ ಪ್ರಬಲ ವಾಯಭಾರ ಕುಸಿತದಿಂದಾಗಿ  ಆಂಧ್ರ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ನ.13ರ ಹೊತ್ತಿಗೆ ಬಂಗಾಳ ಕೊಲ್ಲಿಯ ದಕ್ಷಿಣ ಅಂಡಮಾನ್‌ ಸಮುದ್ರದ  ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗುವ ಸೂಚನೆ ಇದೆ. ಇದೆಲ್ಲರ ಪರಿಣಾಮ ರಾಜ್ಯದ ವಾತಾವರಣದ ಮೇಲೂ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd