ಅಗಲಿದ ಗಣ್ಯರಿಗೆ ಬೆಳಗಾವಿ ಅಧಿವೇಶನದಲ್ಲಿ ಶ್ರದ್ಧಾಂಜಲಿ…ಮೌನಾಚರಣೆ
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಸಭೆಯ ಮೊದಲ ದಿನದ ಅಧಿವೇಶನದ ಅಗಲಿದ ಗಣ್ಯರಿಗೆ ಇಂದು ನಿಮಿಷಗಳ ಕಾಲ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಲಾಪದ ಆರಂಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಗಲಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಕೈಗೆತ್ತಿಕೊಂಡರು.
ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಬಹುಭಾಷಾ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ನಟರಾದ ಪುನೀತ್ ರಾಜ್ ಕುಮಾರ್ , ಎಸ್. ಶಿವರಾಂ ಕರ್ನಾಟಕದ ಮಾಜಿ ರಾಜ್ಯಪಾಲರಾಗಿದ್ದ ಕೆ. ರೋಸಯ್ಯ, ಮಾಜಿ ಸಚಿವರಾದ ಎಸ್. ಆರ್ ಮೊರೆ, ವಿರೂಪಾಕ್ಷಪ್ಪ ಅಗಡಿ, ವಿಧಾನಸಭೆಯ ಮಾಜಿ ಸದಸ್ಯರಾದ ಕೆ. ರಾಮ್ ಭಟ್ , ಹಾಗೂ ಡಾ. ಎಂ.ಪಿ. ಕರ್ಕಿ, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಅಗಲಿದ ಗಣ್ಯರ ಗುಣಗಾನ ಮಾಡಿ, ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಅಲ್ಲದೇ, ಮೃತರ ಅಗಲಿಕೆಯಿಂದಾಗಿರುವ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದರು. ಬಳಿಕ ಸದಸ್ಯರು ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಿಸಿದರು.